ಕಾಲುವೆಗೆ ಉರುಳಿದ ಟ್ರ್ಯಾಕ್ಟರ್ : ರೈತನ ಸಾವು

khushihost
ಕಾಲುವೆಗೆ ಉರುಳಿದ ಟ್ರ್ಯಾಕ್ಟರ್ : ರೈತನ ಸಾವು

ಹಾವೇರಿ: ಕಾಲುವೆಗೆ ಟ್ರ್ಯಾಕ್ಟರ್ ಉರುಳಿ ಬಿದ್ದು ರೈತ ಮೃತಪಟ್ಟಿರುವ ಘಟನೆ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಕುಡುಪಲಿ ಗ್ರಾಮದ ಬಳಿ ನಡೆದಿದೆ.

ರೈತ ಶರಣಪ್ಪ (46)ಮೃತ ರೈತ. ಮಹೀಂದ್ರಾ ಟ್ರ್ಯಾಕ್ಟರ್ ಚಲಾಯಿಸಿಕೊಂಡು ಹೋಗುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ.

ಏಕಾಏಕಿ ರಸ್ತೆಯ ಪಕ್ಕದಲ್ಲಿದ್ದ ಕಲ್ಲಿನ ರಾಶಿ ಮೇಲೆ ಮಹಿಂದ್ರಾ ಟ್ರಾಕ್ಟರ್ ಉರುಳಿ ಬಿದ್ದಿದೆ. ಪರಿಣಾಮ ಕಾಲುವೆಯಲ್ಲಿ ಮುಳುಗಿ ರೈತ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರಟ್ಟಿಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article