5 ವರ್ಷಕ್ಕಿಂತ ಹೆಚ್ಚು ಕಾಲ ಒಂದೇ ಕಡೆ ಇರುವವರ ವರ್ಗಾವಣೆ

khushihost
5 ವರ್ಷಕ್ಕಿಂತ ಹೆಚ್ಚು ಕಾಲ ಒಂದೇ ಕಡೆ ಇರುವವರ ವರ್ಗಾವಣೆ

ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ಐದು ವರ್ಷಕ್ಕಿಂತ ಹೆಚ್ಚು ಅವಧಿ ಒಂದೇ ಕಡೆ ಇರುವ ಬೋಧಕೇತರ ಸಿಬ್ಬಂದಿ ವರ್ಗಾವಣೆ ಮಾಡಲು ಶಿಕ್ಷಣ ಇಲಾಖೆ ಸಿದ್ಧತೆ ನಡೆಸಿದೆ.

ಪ್ರಶ್ನೆ ಪತ್ರಿಕೆ ಸೋರಿಕೆ, ಆಕ್ರಮ ನೇಮಕಾತಿ ಮೊದಲಾದ ಹಗರಣಗಳಲ್ಲಿ ಸಿಬ್ಬಂದಿ ಪಾಲ್ಗೊಂಡ ಹಿನ್ನೆಲೆಯಲ್ಲಿ ಐದು ವರ್ಷಕ್ಕಿಂತ ಹೆಚ್ಚು ಸಮಯ ಒಂದೇ ಕಡೆ ಇರುವ ಬೋಧಕೇತರ ಸಿಬ್ಬಂದಿ ವರ್ಗಾವಣೆ ಮಾಡಲಾಗುವುದು. ಹೀಗೆ 5 ವರ್ಷಕ್ಕಿಂತ ಗೆಚ್ಚು ಸಮಯದಿಂದ ಇರುವ ಸಿಬ್ಬಂದಿಯ ಮಾಹಿತಿ ನೀಡಲು ಶಿಕ್ಷಣ ಇಲಾಖೆ ಎಲ್ಲಾ ಅಧೀನ ಕಚೇರಿಗಳಿಗೆ ನಿರ್ದೇಶನ ನೀಡಿದೆ.

ಐದು ವರ್ಷಕ್ಕಿಂತ ಹೆಚ್ಚು ಸಮಯ ಒಂದೇ ಕಡೆ ಇರುವ ಶಿಕ್ಷಣ ಇಲಾಖೆಯ ಅಧೀಕ್ಷಕರು, ಪ್ರಥಮ ದರ್ಜೆ ಸಹಾಯಕರು, ದ್ವಿತೀಯ ದರ್ಜೆ ಸಹಾಯಕರು, ಶೀಘ್ರ ಲಿಪಿಕಾರರು, ಬೆರಳಚ್ಚುಗಾರರು, ಗ್ರೂಪ್ ಡಿ ನೌಕರರನ್ನು ವರ್ಗಾವಣೆ ಮಾಡಲಾಗುವುದು ಎಂದು ಹೇಳಲಾಗಿದೆ.

Share This Article