ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ : ಇಬ್ಬರು ಸ್ಥಳದಲ್ಲೇ ಸಾವು

khushihost
ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ : ಇಬ್ಬರು ಸ್ಥಳದಲ್ಲೇ ಸಾವು

ಕೊಪ್ಪಳ: ಬೈಕ್​ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಕಾರಣ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ದುರ್ಮರಣ ಹೊಂದಿದ ಘಟನೆ ಜಿಲ್ಲೆಯ ವನಬಳ್ಳಾರಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 50ರ ಬಳಿ ನಡೆದಿದೆ.

ಹನುಮೇಶ (32), ರಮೇಶ ಮಾಲಿಗೌಡ್ರು (32) ಮೃತ ಯುವಕರು. ಮೃತರು ಯಲಬುರ್ಗಾ ತಾಲೂಕಿನ ಕುದರಿಕೊಟಗಿ ಗ್ರಾಮದವರು ಎಂದು ಗುರುತಿಸಲಾಗಿದೆ.

ಬೈಕ್​ಗೆ ಡಿಕ್ಕಿ ಹೊಡೆದು ಅಪರಿಚಿತ ವಾಹನ ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಮುನಿರಾಬಾದ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

 

Share This Article