ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿ : ಇಬ್ಬರು ಯುವಕರು ಸಾವು 

khushihost
ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿ : ಇಬ್ಬರು ಯುವಕರು ಸಾವು 

ಬೆಳಗಾವಿ : ನಿಂತಿದ್ದ ಟ್ರ್ಯಾಕ್ಟರ್‌ಗೆ ಬೈಕ್ ಹಾಯ್ದು ಬೈಕ್‌ ಸವಾರರಿಬ್ಬರೂ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹುಕ್ಕೇರಿ ತಾಲೂಕಿನ ರಕ್ಷಿ-ಶಿರಗಾಂವ ರಸ್ತೆಯಲ್ಲಿ ನಡೆದಿದೆ.

ಸವದತ್ತಿ ತಾಲೂಕಿನ ಚಚಡಿ ಗ್ರಾಮದ ಮಲ್ಲನಗೌಡ ಯಲ್ಲನಗೌಡ ಪಾಟೀಲ (21) ಹಾಗೂ ಸಿದ್ಧಾರೂಢ ವೀರಭದ್ರ ಕರೋಶಿ (24) ಮೃತ ದುರ್ದೈವಿಗಳು.

ಇವರಿಬ್ಬರೂ ಶಿರಗಾಂವ ಗ್ರಾಮಕ್ಕೆ ತೆರಳುತ್ತಿದ್ದರು. ಬೈಕ್‍ನಲ್ಲಿ ವೇಗವಾಗಿ ಹೋಗುತ್ತಿದ್ದ ವೇಳೆ ರಸ್ತೆ ಬದಿ ಟ್ರ್ಯಾಕ್ಟರ್ ನಿಲ್ಲಿಸಿರುವುದನ್ನು ಗಮನಿಸದೇ ಡಿಕ್ಕಿ ಹೊಡೆದಿದ್ದಾರೆ.

ಇಬ್ಬರ ತಲೆಗೂ ಗಂಭೀರವಾಗಿ ಪೆಟ್ಟು ಬಿದ್ದಿತ್ತು. ಕೂಡಲೇ ಸ್ಥಳೀಯರು ಆಂಬುಲೆನ್ಸ್‌ ಕರೆಸಿ ಆಸ್ಪತ್ರೆಗೆ ರವಾನಿಸಿದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಬ್ಬರೂ ಸಾವನ್ನಪ್ಪಿದ್ದಾರೆ.

Share This Article