ಕರ್ನಾಟಕ-ಮಹಾರಾಷ್ಟ್ರ ಮುಖ್ಯಮಂತ್ರಿಗಳ ಮಹತ್ವದ ಸಭೆ ನಂತರ ಕೇಂದ್ರ ಗೃಹ ಸಚಿವರು ಹೇಳಿದ್ದು ಹೀಗೆ…….

khushihost
ಕರ್ನಾಟಕ-ಮಹಾರಾಷ್ಟ್ರ ಮುಖ್ಯಮಂತ್ರಿಗಳ ಮಹತ್ವದ ಸಭೆ ನಂತರ ಕೇಂದ್ರ ಗೃಹ ಸಚಿವರು ಹೇಳಿದ್ದು ಹೀಗೆ…….

ಹೊಸದಿಲ್ಲಿ : ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವೆ ನಡೆಯುತ್ತಿರುವ ಗಡಿ ವಿವಾದದ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ ಶಾ  ಅವರು ಇಂದು ಉಭಯ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಸಿದರು. ಸುಪ್ರೀಮ ಕೋರ್ಟ  ಆದೇಶವರೆಗೂ ಯಾವುದೇ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲ. ಈ ಬಗ್ಗೆ ತಟಸ್ಥ ಸಮಿತಿಯನ್ನು ರಚಿಸಲಾಗುವುದು ಎಂದು ತಿಳಿಸಿದ್ದಾರೆ.

ಸಂಸತ್ ಭವನದ ಲೈಬ್ರರಿ ಕಟ್ಟಡದಲ್ಲಿ ಮಹಾರಾಷ್ಟ್ರ, ಕರ್ನಾಟಕ ಮುಖ್ಯಮಂತ್ರಿಗಳ ಜೊತೆ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅಮಿತ್ ಶಾ, ಸುಪ್ರೀಮ ಕೋರ್ಟ ಆದೇಶವರೆಗೂ ಯಾವುದೇ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲ. ಇದನ್ನು ಎರಡು ರಾಜ್ಯಗಳು ರಾಜಕೀಯ ಚರ್ಚಾ ವಿಷಯವನ್ನಾಗಿ ಮಾಡಬಾರದು. ಸಮಸ್ಯೆ ಬಗೆಹರಿಸಲು ತಟಸ್ಥ ಸಮಿತಿಯನ್ನು ರಚಿಸಲಾಗುವುದು. ರಾಜಕೀಯ ಭಿನ್ನಾಭಿಪ್ರಾಯ ಏನೇ ಇರಲಿ. ಗಡಿಯಲ್ಲಿ ಶಾಂತಿಯನ್ನು ಸ್ಥಾಪಿಸಬೇಕಿದೆ ಎಂದು ಹೇಳಿದರು.

ಮಹಾರಾಷ್ಟ್ರ, ಕರ್ನಾಟಕ ಮುಖ್ಯಮಂತ್ರಿಗಳ ಜೊತೆ ಚರ್ಚಿಸಲಾಗಿದೆ. ಗಡಿ ವಿವಾದ ಸಂಬಂಧ ಸುಪ್ರೀಮ ಕೋರ್ಟ​ ಆದೇಶಕ್ಕಾಗಿ ಕಾಯುತ್ತಿದ್ದೇವೆ. ಮುಖ್ಯಮಂತ್ರಿಗಳಾದ ಬೊಮ್ಮಾಯಿ, ಏಕನಾಥ ಶಿಂಧೆ ಜೊತೆ ಚರ್ಚೆ ಮಾಡಿದ್ದು, ಗಡಿ ವಿವಾದವನ್ನು ರಸ್ತೆಯಲ್ಲಿ ಪರಿಹರಿಸಿಕೊಳ್ಳಲು ಬರುವುದಿಲ್ಲ ಎದು ಹೇಳಿದರು.

ಗಡಿ ಸಮಸ್ಯೆ ಬಗೆಹರಿಸಲು ತಟಸ್ಥ ಸಮಿತಿಯನ್ನು ರಚಿಸಲಾಗುವುದು. ಸಮಿತಿಯಲ್ಲಿ ಎರಡು ರಾಜ್ಯಗಳ ಮಂತ್ರಿಗಳು ಇರಲಿದ್ದು, ಪ್ರಯಾಣಿಕರಿಗೆ, ವ್ಯಾಪಾರಿಗಳಿಗೆ ಯಾವುದೇ ತೊಂದರೆ ಆಗಬಾರದು. ಈ ಬಗ್ಗೆ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದರು.

ಸಭೆಯಲ್ಲಿ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ, ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಕೂಡ ಭಾಗಿಯಾಗಿದ್ದರು.

Share This Article