ಅಂಬೇಡ್ಕರ್​ ಹೆಸರು ಹೇಳುವ ಯೋಗ್ಯತೆ ಕಾಂಗ್ರೆಸ​ಗಿಲ್ಲ : ಯಡಿಯೂರಪ್ಪ 

khushihost
ಅಂಬೇಡ್ಕರ್​ ಹೆಸರು ಹೇಳುವ ಯೋಗ್ಯತೆ ಕಾಂಗ್ರೆಸ​ಗಿಲ್ಲ : ಯಡಿಯೂರಪ್ಪ 

ವಿಜಯನಗರ : ಮತ್ತೆ ಮುಖ್ಯಮಂತ್ರಿ ಆಗಲಿದ್ದೇನೆ ಎಂದು ಸಿದ್ದರಾಮಯ್ಯ ತಿರುಕನ ಕನಸು ಕಾಣುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಾಗ್ಧಾಳಿ ನಡೆಸಿದ್ದಾರೆ.

ಹೂವಿನಹಡಗಲಿಯಲ್ಲಿ ನಡೆದ ಬಿಜೆಪಿ ಸಂಕಲ್ಪ ಯಾತ್ರೆ ವೇಳೆ ಮಾತನಾಡಿದ ಅವರು, ದೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ​ ಅಡ್ರೆಸ್ ಇಲ್ಲದಂತಾಗಿದೆ.. ಕರ್ನಾಟಕದಲ್ಲಿ ಅಡ್ರೆಸ್​​ ಹುಡುಕಲು ಕಾಂಗ್ರೆಸ್ ಪಾದಯಾತ್ರೆ ನಡೆಸಿದೆ ಎಂದರು.

ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಸಿದ್ದರಾಮಯ್ಯ ತಿರುಕನ ಕನಸು ಕಾಣುತ್ತಿದ್ದಾರೆ. ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಅಂಬೇಡ್ಕರ್​ ಹೆಸರು ಹೇಳುವ ಯೋಗ್ಯತೆ ಕಾಂಗ್ರೆಸ್​ಗಿಲ್ಲ ,ಚುನಾವಣೆಯಲ್ಲಿ ಅಂಬೇಡ್ಕರ್ ರನ್ನು 2 ಬಾರಿ ಸೋಲಿಸಿದರು. ಕರ್ನಾಟಕದಲ್ಲಿ ಅಡ್ರೆಸ್​​ ಹುಡುಕಲು ಕಾಂಗ್ರೆಸ್ ಪಾದಯಾತ್ರೆ ನಡೆಸಿದೆ ಎಂದರು.

 

Share This Article